ಬೆಂಗಳೂರು: ಕೊರೋನಾ ಮೂರನೇ ಅಲೆ ಆತಂಕದ ನಡುವೆಯೇ ಮೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡಲಾಗಿದೆ.
ರಾಜ್ಯ ಚುನಾವಣಾ ಆಯೋಗ ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಹಾಗೂ ರಾಜ್ಯದ ವಿವಿಧೆಡೆ ತೆರವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಿದೆ.
ಆಗಸ್ಟ್ 16 ರಂದು ಆಯಾ ಜಿಲ್ಲೆಗಳಲ್ಲಿ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಸೆಪ್ಟಂಬರ್ 6 ರಂದು ಮತಎಣಿಕೆ ನಡೆಯಲಿದೆ.