alex Certify BIG NEWS: ಸಿಂದಗಿ, ಹಾನಗಲ್ ಉಪ ಚುನಾವಣೆಗೆ ಇಂದು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಂದಗಿ, ಹಾನಗಲ್ ಉಪ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಮತ್ತು ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ.

ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಅಶೋಕ ಮನಗೂಳಿ, ಬಿಜೆಪಿಯಿಂದ ರಮೇಶ ಭೂಸನೂರ, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸ್ಪರ್ಧಿಸಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಶ್ರೀನಿವಾಸ ಮಾನೆ, ಬಿಜೆಪಿಯಿಂದ ಶಿವರಾಜ ಸಜ್ಜನರ ಮತ್ತು ಜೆಡಿಎಸ್ ನಿಂದ ನೀಯಾಜ್ ಶೇಖ್ ಕಣದಲ್ಲಿದ್ದಾರೆ. ಆಡಳಿತ ಮತ್ತು ವಿಪಕ್ಷಗಳು ಉಪಚುನಾವಣೆಯಲ್ಲಿ ಭಾರಿ ಪ್ರಚಾರ ನಡೆಸಿದ್ದು, ಮತದಾರರು ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಕಳೆದ ಚುನಾವಣೆಯಲ್ಲಿ ಸಿಂದಗಿಯಲ್ಲಿ ಜೆಡಿಎಸ್ ಮತ್ತು ಹಾನಗಲ್ ನನಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದರು. ಈ ಬಾರಿ ಮೂರು ಪಕ್ಷಗಳು ಗೆಲುವಿಗೆ ಕಾರ್ಯತಂತ್ರ ರೂಪಿಸಿವೆ. ಮತದಾರರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ನವೆಂಬರ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...