alex Certify ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ.

ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಸ್ಥಳೀಯ ಕಾರ್ಯಕರ್ತರು ಮತದಾರರ ಮನವೊಲಿಕೆಗೆ ಅಂತಿಮಹಂತದ ಕಸರತ್ತು ನಡೆಸಿದ್ದಾರೆ. ಏಪ್ರಿಲ್ 17 ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಉಪಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಬಲ್ಲದೆಂದು ಹೇಳಲಾಗಿದ್ದ ಸಿಡಿ ಪ್ರಕರಣ ಪ್ರಸ್ತಾಪವೇ ಆಗಿಲ್ಲ. ಆದರೆ ಅನೇಕ ವಿಚಾರಗಳಿಗೆ ನಾಯಕರ ನಡುವೆ ವಾಕ್ಸಮರವೇ ನಡೆದಿದೆ.

ತಮ್ಮ ಅಭ್ಯರ್ಥಿಗಳ ಪರವಾಗಿ ನಾಯಕರು ಪ್ರಚಾರ ನಡೆಸಿದ್ದು ಯಾರಿಗೆ ಗೆಲುವು ಸಿಗಲಿದೆ ಎನ್ನುವುದು ನಾಳೆ ನಿರ್ಧಾರವಾಗಲಿದೆ. ಉಪಚುನಾವಣೆ ದೊಡ್ಡಮಟ್ಟದ ಬದಲಾವಣೆಯನ್ನು ತರದಿದ್ದರೂ ರಾಜ್ಯರಾಜಕಾರಣದಲ್ಲಿ ಒಂದಿಷ್ಟು ಬೆಳವಣಿಗೆಗೆ ಕಾರಣವಾಗಬಹುದು. ಇದಕ್ಕಾಗಿ ಫಲಿತಾಂಶದವರೆಗೆ ಕಾಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...