ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
14 ಕ್ಷೇತ್ರಗಳಲ್ಲಿ ಮತದಾನ ನಾಳೆ ನಡೆಯಲಿದ್ದು, ಚುನಾವಣಾ ಕಾರ್ಯಕ್ಕೆ 1.4 ಲಕ್ಷ ಸಿಬ್ಬಂದಿ ನಿಯೋಜಿಸಲಾಗಿದೆ. ಭದ್ರತಾ ಕಾರ್ಯ ಒಂದು ಲಕ್ಷಕ್ಕೂ ಹೆಚ್ಚು ಪೊಲೀಸರು, ಅರೆ ಸೇನಾಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೊದಲ ಹಂತದ ಚುನಾವಣೆಗಾಗಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
1971 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 1370 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಉಳಿದ ಮತಗಟ್ಟೆಗಳಲ್ಲಿ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದೆ. ಅತಿ ಸೂಕ್ಷ್ಮ ಪ್ರದೇಶಗಳ ಮತಗಟ್ಟೆಗಳಲ್ಲಿ ನಿಗಾವಹಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.