ನವದೆಹಲಿ: ಇಂದು ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಉತ್ತರಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, ಗೋವಾ ಮತ್ತು ಉತ್ತರಾಖಂಡ್ ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 9 ಜಿಲ್ಲೆಗಳ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 586 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಗೋವಾ ರಾಜ್ಯದ 40 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಇಂದು ಮತದಾನ ನಡೆಯಲಿದೆ. 301 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಸರ್ಕಾರ ರಚನೆ ಮಾಡಿರಲಿಲ್ಲ. ಬಿಜೆಪಿ 13 ಸ್ಥಾನಗಳಿಸಿದರೂ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಇಂದು ಗೋವಾ ವಿಧಾನಸಭೆ ಚುನಾವಣೆ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ಉತ್ತರಾಖಂಡ್ ರಾಜ್ಯದ 70 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದ್ದು, 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 57, ಕಾಂಗ್ರೆಸ್ ಪಕ್ಷ 11 ಸ್ಥಾನಗಳಲ್ಲಿ ಜಯ ಗಳಿಸಿತ್ತು.