ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಹೊರಡಿಸಿದ್ದಾರೆ.
ಮತದಾನ ಪ್ರಕ್ರಿಯೆ ಕುರಿತು ಎರಡನೇ ಹಂತದ ತರಬೇತಿ ನೀಡಲಾಗಿತ್ತು. ಇಂದು ತರಬೇತಿಗೆ ಗೈರುಹಾಜರಾದ ಮೂವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಮಾವಿನಕುರ್ವಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲಕ್ಷ್ಮಣ ಮೊಗೇರ, ಮುಂಡಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್, ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಶ್ರೀಧರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮತಗಟ್ಟೆ ಅಧಿಕಾರಿಗಳಾಗಿ ಈ ಮೂವರನ್ನು ನಿಯೋಜನೆ ಮಾಡಲಾಗಿತ್ತು, ತರಬೇತಿಗೆ ಗೈರುಹಾಜರಾದ ಹಿನ್ನೆಲೆಯಲ್ಲಿ ಮೂವರು ನೌಕರರ ಅಮಾನತು ಮಾಡಲಾಗಿದೆ.