alex Certify BIG NEWS: ರಾಜ್ಯದ 4 ಸೇರಿ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ 4 ಸೇರಿ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ

ನವದೆಹಲಿ: ಜೂನ್ 10 ರಂದು ರಾಜ್ಯಸಭೆಯ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಕೂಡ ಚುನಾವಣೆ ನಿಗದಿಯಾಗಿದೆ.

ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಮ್ ರಮೇಶ್ ನಿವೃತ್ತಿಯಿಂದ 3 ಸ್ಥಾನಗಳು, ಆಸ್ಕರ್ ಫರ್ನಾಂಡಿಸ್ ನಿಧನದಿಂದ ತೆರವಾಗಿರುವ ಒಂದು ಸ್ಥಾನ ಸೇರಿದಂತೆ ಕರ್ನಾಟಕದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಜೂನ್ 10 ರಂದು ಮತದಾನ, ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆಯಲಿದೆ. ನಾಮಪತ್ರಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ.

ನಿವೃತ್ತಿಯಾಗುವವರಲ್ಲಿ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ಚಿದಂಬರಂ ಸೇರಿದ್ದಾರೆ. 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.

15 ರಾಜ್ಯಗಳ 57 ಸಂಸದರ ಅವಧಿ ಜೂನ್‌ನಿಂದ ಆಗಸ್ಟ್‌ ವರೆಗಿನ ಅವಧಿಯಲ್ಲಿ ಕೊನೆಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ. ನಿವೃತ್ತರಾದವರಲ್ಲಿ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್, ಜೈರಾಮ್ ರಮೇಶ್ ಮತ್ತು ಪಿ.ಚಿದಂಬರಂ; ಶಿವಸೇನಾ ಸಂಸದ ಸಂಜಯ್ ರಾವುತ್, ಬಿಜೆಪಿ ಸಂಸದರಾದ ವಿಜಯ್ ಸಹಸ್ರಬುಡ್ಡೆ ಮತ್ತು ಸೈಯದ್ ಜಾಫರ್ ಇಸ್ಲಾಂ ಅವರಿದ್ದಾರೆ.

ಚುನಾವಣಾ ಆಯೋಗದ ವೇಳಾಪಟ್ಟಿಯ ಪ್ರಕಾರ, ಆಯಾ ರಾಜ್ಯಗಳ ವಿಧಾನಸಭೆಗಳಲ್ಲಿ ಮೇ 24 ರಿಂದ ಮೇ 31 ರವರೆಗೆ ನಾಮ ಪತ್ರ ಸಲ್ಲಿಕೆ, ಜೂನ್ 10 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಸಂಜೆ 5 ರಿಂದ ಮತಗಳನ್ನು ಎಣಿಕೆ ನಡೆಯಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...