alex Certify ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ: ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಚುನಾವಣೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಸಿಆರ್‌ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.

ನ.28ರಂದು ಮಹಾನಗರ ಪಾಲಿಕೆಯ 500 ಮೀ. ವ್ಯಾಪ್ತಿಯಲ್ಲಿ ನಿಷೇಧಿಸಲಾದ ಚಟುವಟಿಕೆಗಳು:

ಇಂಕ್(ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.

ಯಾವುದೇ ದಾಹಕ(ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯ್ಯುವುದು, ಪಟಾಕಿ / ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತ್ರಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು. ಕಾರು/ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿಯನ್ನು ಆಯೋಜಿಸುವುದು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ತಿರುಗಾಡುವುದು ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಹೊರತುಪಡಿಸಿ.

ಅದೇ ರೀತಿಯಾಗಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನವನ್ನು ಹಾಗೂ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...