alex Certify ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಕಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಕಟೀಲ್

ಬೆಂಗಳೂರು: ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ವಿದ್ಯುತ್ ಬಿಲ್ ಕಟ್ಟಬಾರದು. ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದರು. ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದು ತಿಳಿಸಿದ್ದರು. ಹೀಗಾಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯನವರೇ ಹೇಳಿರುವಾಗ ಜನ ಏಕೆ ವಿದ್ಯುತ್ ಬಿಲ್ ಕಟ್ಟುತ್ತಾರೆ? ಬಿಲ್ ಕಟ್ಟಬಾರದು, ವಿದ್ಯುತ್ ಬಿಲ್ ಕಟ್ಟುವ ಅಗತ್ಯವಿಲ್ಲ ಎಂದು ಜನರಿಗೂ ವಿನಂತಿ ಮಾಡುತ್ತೇನೆ. ನನ್ನ ಪ್ರಕಾರ ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...