ಬೆಂಗಳೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರ್ ವೊಂದು ರಸ್ತೆ ಮಧ್ಯೆಯೇ ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.
ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಚಾಲಕ ತಕ್ಷಣ ಕಾರು ನಿಲ್ಲಿಸಿ ಕೆಳಗಿಳಿದಿದ್ದಾನೆ. ಅಷ್ಟರಲ್ಲಿ ಬೆಂಕಿ ಕಾರಿನ ತುಂಬೆಲ್ಲ ಅವರಿಸಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.
ಅದೃಷ್ಟವಶಾತ್ ಕಾರು ಚಾಲಕ ಬಚಾವ್ ಆಗಿದ್ದಾನೆ. ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ನೋಡ ನೋಡುತ್ತಲೇ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಎಲೆಕ್ಟ್ರಿಕ್ ಕಾರು ಕಣ್ಮುಂದೆಯೇ ಸುಟ್ಟು ಕರಕಲಾಗಿ ಅಸ್ತಿ ಪಂಜರದಂತಾದುದನ್ನು ಕಂಡು ಕಾರು ಮಾಲೀಕ ಶಾಕ್ ಆಗಿದ್ದಾರೆ.