ಯಾದಗಿರಿ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ದಂಪತಿ ಸಜೀವ ದಹನವಾಗಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ.
ಪತಿ ರಾಗಯ್ಯ(39), ಪತ್ನಿ ಶಿಲ್ಪಾ(35) ಮೃತಪಟ್ಟವರು ಎಂದು ಹೇಳಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿ ಬೆಂಕಿ ಜ್ವಾಲೆ ಆವರಿಸಿ ದುರಂತ ಸಂಭವಿಸಿದೆ. ಅಶೋಕಯ್ಯ ಕಾಳಬೆಳಗುಂದಿ ಎಂಬುವರಿಗೆ ಸೇರಿದ ಮನೆಯಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.