alex Certify ಜೆಡಿಎಸ್ ಕಚೇರಿಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಕಚೇರಿಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯವೆಸಗಿರುವ ಆರೋಪ ಕೇಳಿ ಬಂದಿದೆ. ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ವಿದ್ಯುತ್ ದೀಪಲಂಕಾರ ಮಾಡಲಾಗಿದ್ದು, ಇದಕ್ಕಾಗಿ ಪಕ್ಕದ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಲಾಗಿತ್ತು. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಬಗ್ಗೆ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ.

ಇದಾದ ನಂತರ ಮಂಗಳವಾರ ರಾತ್ರಿ ಜೆಡಿಎಸ್ ಕಚೇರಿ ಗೋಡೆಗಳ ಮೇಲೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಕಚೇರಿ ಮತ್ತು ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಿದ್ದು, ಶ್ರೀರಾಮಪುರ ಠಾಣೆ ಪೊಲೀಸರು ಪೋಸ್ಟರ್ ಗಳನ್ನು ತೆರವುಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...