alex Certify ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಮಾವಿನ ಹಣ್ಣು ಕೇಳಲು ಹೋದ ವಿದ್ಯಾರ್ಥಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.

9ನೇ ತರಗತಿ ಓದುತ್ತಿದ್ದ ಬಾಲಕ ಸಾಯಿ ಭುವನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾಸ್ಟೆಲ್ ಮಹಡಿ ಮೇಲೆ ಒಣಗಲು ಹಾಕಿದ್ದ ಬಟ್ಟೆ ತರಲು ಹೋದ ವೇಳೆಯಲ್ಲಿ ಅಲ್ಲೇ ಇದ್ದ ಮಾವಿನ ಹಣ್ಣು ಕಂಡು ಕೀಳಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿ ಮಹಡಿ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಆತನೊಂದಿಗೆ ಆತನ ಸಹೋದರ ಕೂಡ ಇದ್ದು, ಎರಡು ವರ್ಷಗಳಿಂದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...