
ಶಿವಮೊಗ್ಗ: ವಿದ್ಯುತ್ ಸ್ಪರ್ಶಿಸಿ ಹೋಟೆಲ್ ಮಾಲೀಕ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಗುರುದರ್ಶಿನಿ ಹೋಟೆಲ್ ಮಾಲೀಕ ಪ್ರಶಾಂತ್(35) ಮೃತಪಟ್ಟವರು.
ಹೋಟೆಲ್ ನಲ್ಲಿ ಇತ್ತೀಚೆಗೆ ಸ್ವಿಚ್ ಹಾಕಲು ಹೋದಾಗ ವಿದ್ಯುತ್ ತಗುಲಿ ಅವರು ಸಾವನ್ನಪ್ಪಿದ್ದಾರೆ. ಪ್ರಶಾಂತ್ ಹೋಟೆಲ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಒದ್ದೆಯಾಗಿದ್ದ ಸ್ವಿಚ್ ಬೋರ್ಡ್ ಮುಟ್ಟಿದ್ದು, ಅದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.