
ಶಿವಮೊಗ್ಗ: ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್ ನಲ್ಲಿ ನಡೆದಿದೆ.
ಹರೀಶ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಯ್ಯ ಲೇಔಟ್ ನಲ್ಲಿ ಕಟ್ಟಡ ನಿರ್ಮಿಸುತ್ತಿದ್ದು, ಕೆಲಸಕ್ಕೆ ಕರೆದುಕೊಂಡು ಬಂದಿದ್ದ ಮೇಸ್ತ್ರಿ ಸಿಮೆಂಟ್ ಮಿಕ್ಸಿಂಗ್ ಯಂತ್ರ ಸ್ವಚ್ಛಗೊಳಿಸುವಂತೆ ತಿಳಿಸಿದ್ದಾರೆ. ಆದರೆ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕಾರಣ ವಿದ್ಯುತ್ ಪ್ರವಹಿಸಿ ಹರೀಶ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
10 ವರ್ಷದಿಂದ ಗಾರೆ ಕೆಲಸ ಮಾಡಿಕೊಂಡಿದ್ದ ಹರೀಶ್ ಗೆ ಮದುವೆ ನಿಶ್ಚಯವಾಗಿತ್ತು. ಇಂಜಿನಿಯರ್ ಮತ್ತು ಮೇಸ್ತ್ರಿ ನಿರ್ಲಕ್ಷದಿಂದ ಸಾವು ಸಂಭವಿಸಿದೆ ಎಂದು ಪೋಷಕರು ದೂರಿದ್ದಾರೆ.