
ಹೊಸಪೇಟೆ: ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ತಗುಲಿದ ಮತ್ತೊಂದು ಪ್ರಕರಣ ವರದಿಯಾಗಿದೆ. ವಿಜಯನಗರ ಜಿಲ್ಲೆ ಕೊಟ್ಟೂರು ಸಮೀಪದ ಸುಟ್ಟಕೋಡಿಹಳ್ಳಿಯಲ್ಲಿ ಚಾರ್ಜ್ ವೇಳೆಯಲ್ಲಿಯೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ತಗುಲಿದೆ.
ಪತ್ರಕರ್ತ ಉಜ್ಜಿನಿ ರುದ್ರಪ್ಪ ಶುಕ್ರವಾರ ತಮ್ಮ ಮನೆ ಆವರಣದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಚಾರ್ಜ್ ಗೆ ಇಟ್ಟಿದ್ದರು. ಇದ್ದಕ್ಕಿದ್ದಂತೆ ಸ್ಕೂಟರ್ ಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದೆ. ಸಮೀಪದಲ್ಲಿದ್ದ ಯುವಕರು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮನೆಯ ಆವರಣದಲ್ಲಿದ್ದ ಸ್ಕೂಟರ್ ಹೊರಗೆ ತಂದಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.