
ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ನಡೆದಿದೆ.
ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು 25 ವರ್ಷದ ಒಂಟಿಸಲಗ ಸಾವನ್ನಪ್ಪಿದೆ. ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಘಟನ ಅಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮತ್ತೊಂದೆಡೆ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಭತ್ತದ ಗದ್ದೆ ಸಂಪೂರ್ಣ ನಾಶವಾಗಿದೆ. ಮುಂಜಾನೆಯೇ ಭತ್ತದ ಗದ್ದೆಗೆ ನುಗ್ಗಿದ ಕಾಡಾನೆ ಹಿಂಡು ಗದೆಯನ್ನು ತುಳಿದು, ತಿಂದು ನಾಶಪಡಿಸಿವೆ.