
ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಅನೀಲ್ ಕುಮಾರ್ (29) ಹಾಗೂ ಪುಟ್ಟರಾಜು (5) ಮೃತ ದುರ್ದೈವಿಗಳು.
ಜಮೀನಿಗೆ ಹೋದವರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.