alex Certify BIG NEWS: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ: ಹಣ ಕೊಟ್ರೂ ಬೇರೆ ರಾಜ್ಯಗಳಿಂದ ಸಿಗ್ತಿಲ್ಲ ವಿದ್ಯುತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ: ಹಣ ಕೊಟ್ರೂ ಬೇರೆ ರಾಜ್ಯಗಳಿಂದ ಸಿಗ್ತಿಲ್ಲ ವಿದ್ಯುತ್

ಯಾದಗಿರಿ: ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ವಿದ್ಯುತ್ ಸಮಸ್ಯೆ ಇದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆ ವಿಚಾರವನ್ನು ಮುಖ್ಯಮಂತ್ರಿಗಳು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಎಲ್ಲಾ ವಿದ್ಯುತ್ ಕಂಪನಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂಧನ ಸಚಿವರು ವಿದ್ಯುತ್ ಖರೀದಿಸಲು ಎಲ್ಲಾ ಕಡೆ ಪ್ರಯತ್ನ ಮಾಡುತ್ತಿದ್ದಾರೆ. ಇರುವುದರಲ್ಲೇ ವೇರಿಯೇಷನ್ ಮಾಡಿ ವಿದ್ಯುತ್ ನೀಡಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿದೆ. ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಹಣ ಕೊಡುತ್ತೇವೆ ಎಂದರೂ ಬೇರೆ ರಾಜ್ಯಗಳಿಂದ ವಿದ್ಯುತ್ ಸಿಗುತ್ತಿಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...