ಬೆಂಗಳೂರು: ನಿರಾಕ್ಷೇಪಣಾ ಪತ್ರ ಇಲ್ಲದೆ ರಾಜ್ಯದ ಗ್ರಾಮೀಣ ಪ್ರದೇಶದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಪಡಿತರ ಚೀಟಿ ಆಧಾರದ ಮೇಲೆ ನಿರಾಕ್ಷೇಪಣಾ ಪತ್ರ ಇಲ್ಲದೆ ಗ್ರಾಮೀಣ ಭಾಗದಲ್ಲಿ ಬಡವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ. ಸುಮಾರು 3 ಲಕ್ಷ ಮನೆಗಳಿಗೆ ಮುಂದಿನ 100 ದಿನಗಳೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿ ಇದ್ದರೆ ಸಾಕು, ಅವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗದಲ್ಲಿ ಅನೇಕ ಬಡವರು ಮನೆ ನಿರ್ಮಿಸಿಕೊಂಡಿದ್ದರೂ, ವಿದ್ಯುತ್ ಸಂಪರ್ಕ ಪಡೆಯಲು ತೊಂದರೆಯಾಗಿದೆ. ಹಿನ್ನೆಲೆಯಲ್ಲಿ ಬೆಳಕು ಯೋಜನೆಯ ಮೂಲಕ ಎನ್ಒಸಿ ಇಲ್ಲದೇ ರೇಷನ್ ಕಾರ್ಡ್ ಆಧರಿಸಿ ಎಲ್ಲರಿಗೂ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೇಳಿದ್ದಾರೆ.