alex Certify ಪಡಿತರ ಚೀಟಿ ಹೊಂದಿದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: 3 ಲಕ್ಷ ಬಡವರ ಮನೆಗೆ ವಿದ್ಯುತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: 3 ಲಕ್ಷ ಬಡವರ ಮನೆಗೆ ವಿದ್ಯುತ್

ಬೆಂಗಳೂರು: ನಿರಾಕ್ಷೇಪಣಾ ಪತ್ರ ಇಲ್ಲದೆ ರಾಜ್ಯದ ಗ್ರಾಮೀಣ ಪ್ರದೇಶದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಪಡಿತರ ಚೀಟಿ ಆಧಾರದ ಮೇಲೆ ನಿರಾಕ್ಷೇಪಣಾ ಪತ್ರ ಇಲ್ಲದೆ ಗ್ರಾಮೀಣ ಭಾಗದಲ್ಲಿ ಬಡವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ. ಸುಮಾರು 3 ಲಕ್ಷ ಮನೆಗಳಿಗೆ ಮುಂದಿನ 100 ದಿನಗಳೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿ ಇದ್ದರೆ ಸಾಕು, ಅವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗದಲ್ಲಿ ಅನೇಕ ಬಡವರು ಮನೆ ನಿರ್ಮಿಸಿಕೊಂಡಿದ್ದರೂ, ವಿದ್ಯುತ್ ಸಂಪರ್ಕ ಪಡೆಯಲು ತೊಂದರೆಯಾಗಿದೆ. ಹಿನ್ನೆಲೆಯಲ್ಲಿ ಬೆಳಕು ಯೋಜನೆಯ ಮೂಲಕ ಎನ್ಒಸಿ ಇಲ್ಲದೇ ರೇಷನ್ ಕಾರ್ಡ್ ಆಧರಿಸಿ ಎಲ್ಲರಿಗೂ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...