ಬೆಂಗಳೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಬೆಸ್ಕಾಂ ನೌಕರ ಸಾವನ್ನಪ್ಪಿದ ಘಟನೆ ಯಮರೆ ಗ್ರಾಮದ ಬಳಿ ನಡೆದಿದೆ.
ವಿಜಯಪುರದ ಪವನ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಯಮರೆ ಗ್ರಾಮದ ಬಳಿ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನೆಕ್ಷನ್ ಕಾರ್ಯ ಕೈಗೊಳ್ಳಲಾಗಿತ್ತು. ಈ ವೇಳೆ ವಿದ್ಯುತ್ ಪ್ರವಹಿಸಿ ನೌಕರ ಪವನ್ ಮೃತಪಟ್ಟಿದ್ದಾರೆ. ಮೇಲಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿದೆ ಎನ್ನಲಾಗಿದ್ದು, ಬೆಸ್ಕಾಂ ಜೆಇ ವಿರುದ್ಧ ಯಮರೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.