
ಕಲಬುರಗಿ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಂಗಾಪುರ ಗ್ರಾಮದಲ್ಲಿ ನಡೆದಿದೆ.
ದಂಗಾಪುರದ ಅಜ್ಜ, ಮೊಮ್ಮಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬಾದಾಸ್ ಶ್ರೀಖಂಡ(58) ಮತ್ತು ಅವರ ಮೊಮ್ಮಗ ಕೃಷ್ಣ(16) ಮೃತಪಟ್ಟವರು ಎಂದು ಹೇಳಲಾಗಿದೆ. ನಿನ್ನೆ ಸಂಜೆ ತಮ್ಮ ಜಮೀನಿಗೆ ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.