ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಮಾಸಿಕ ಅರ್ಹ 48 ಯೂನಿಟ್ ಗಳಿಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇಕಡ 10 ರಷ್ಟು ಹೆಚ್ಚುವರಿ ವಿದ್ಯುತ್ ಗೆ ಬದಲಾಗಿ 10 ಯೂನಿಟ್ ಹೆಚ್ಚುವರಿ ವಿದ್ಯುತ್ ನೀಡಲಾಗುವುದು.
ಸರಾಸರಿ 48 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವ ಸುಮಾರು 70ಲಕ್ಷ ಗ್ರಾಹಕರಿಗೆ ಇದರಿಂದ ಪ್ರಯೋಜನ ಸಿಗಲಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಅತ್ಯಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಇನ್ನು ಮುಂದೆ ಸಂಪೂರ್ಣ ಶೂನ್ಯ ಬಿಲ್ ಸಿಗಲಿದೆ. ರಾಜ್ಯ ಸರ್ಕಾರ ಇದಕ್ಕೆ ವಾರ್ಷಿಕ 398 ಕೋಟಿ ರೂ. ಹೆಚ್ಚುವರಿ ಸಹಾಯಧನ ನೀಡಲಿದೆ.
ಗೃಹಜ್ಯೋತಿ ಯೋಜನೆಗೆ 1.65 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. 1.59 ಕೋಟಿ ರೂ. ಒಟ್ಟು ಫಲಾನುಭವಿಗಳ ಸಂಖ್ಯೆಯಾಗಿದ್ದು, ಒಟ್ಟು ಸಬ್ಸಿಡಿ ಮೊತ್ತ 3578 ಕೋಟಿ ರೂ. ಆಗಿದೆ.