alex Certify ಕಳ್ಳ ಮಾರ್ಗದಲ್ಲಿ ವಿದ್ಯುತ್ ಮಾರಾಟ; ಆತ್ಮಸಾಕ್ಷಿ ಇಲ್ಲದ ಸರ್ಕಾರಕ್ಕೆ ಹಣ ಮಾಡುವುದೇ ದಂಧೆ: ವಿದ್ಯುತ್ ದರ ಹೆಚ್ಚಳಕ್ಕೆ HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳ್ಳ ಮಾರ್ಗದಲ್ಲಿ ವಿದ್ಯುತ್ ಮಾರಾಟ; ಆತ್ಮಸಾಕ್ಷಿ ಇಲ್ಲದ ಸರ್ಕಾರಕ್ಕೆ ಹಣ ಮಾಡುವುದೇ ದಂಧೆ: ವಿದ್ಯುತ್ ದರ ಹೆಚ್ಚಳಕ್ಕೆ HDK ಆಕ್ರೋಶ

ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರ್ಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರ್ಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರ್ಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ. ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು ಎಂದು ಟ್ವೀಟ್ ಮಾಡಿದ್ದಾರೆ.

ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರ್ಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರ್ಕಾರದ ಕರ್ತವ್ಯ ಎಂದು ಹೇಳಿದರು.

ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರ್ಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರ್ಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
7 dalykai namuose, kuriuos būtų Agrastų sodinimas: kaip pavasarį pamaitinti juos nuo vieno Geriausią energijos suteikiančios arbatos įvardijo mitybos specialistai „Garsioji draudžiama: didelė bauda 6 geriausios dovanos vyrui: idėjos, kurios jį pradžiugins 4 patikimi būdai pašalinti įbrėžimus nuo stiklo: patarimai ir gudrybės Kaip išvalyti nepriširdžiusią keptuvę iš vidaus ir iš išorės: Žmonės vis mažiau gyvena: mokslininkai nustatė tris