ಬೆಂಗಳೂರು: ಬೆಂಗಳೂರಿನಲ್ಲಿ ಓಸಿ ಇಲ್ಲದವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಕೂಡ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಐದು ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಸರ್ಕಾರದ ಅಧಿಕೃತ ಆದೇಶ ಹೊರಬೀಳಲಿದೆ.
ಓಸಿ ಇಲ್ಲದವರಿಗೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು. ಅಂದಿನ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಈ ಬಗ್ಗೆ ಆದೇಶಿಸಿದ್ದರು. ನಿಯಮ ಬದಲಿಸುವಂತೆ ಇಂಧನ ಸಚಿವ ಸುನಿಲ್ ಕುಮಾರ್ ಗೆ ಮನವಿ ಮಾಡಲಾಗಿತ್ತು.
ಇಂಧನ ಸಚಿವರನ್ನು ಬೆಂಗಳೂರು ಬಿಜೆಪಿ ಶಾಸಕರು ಭೇಟಿಯಾಗಿ ಮನವಿ ಮಾಡಿದ್ದು, ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ವಾಸ್ತವ್ಯ ಪ್ರಮಾಣ ಪತ್ರ ಇಲ್ಲದಿರುವವರಿಗೂ ವಿದ್ಯುತ್ ಸಂಪರ್ಕ ನೀಡುವ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರದಲ್ಲಿಯೇ ಸರ್ಕಾರದ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗಿದೆ.