ಚಿಕ್ಕಮಗಳೂರು: ವಿದ್ಯುತ್ ಕಣ್ಣ ಮುಚ್ಚಾಲೆ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ.
ಕೆಲವೇ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಸುಧಾರಣೆಯಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಆದೇಶ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಸಮಸ್ಯೆ ಸುಧಾರಣೆಯಾಗುತ್ತದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಳೆಯಿಂದಾಗಿ ರಾಜ್ಯಕ್ಕೆ ಬರಬೇಕಾದ ಕಲ್ಲಿದ್ದಲು ತೇವಗೊಂಡು ಹಾಳಾಗಿದೆ. ಹೀಗಾಗಿ ಗುಣಮಟ್ಟ ಹೆಚ್ಚಿಸಬೇಕಿದ್ದು, ಇದು ಒಂದು ದಿನದಲ್ಲಿ ಮುಗಿಯುವ ಕೆಲಸವಲ್ಲ, ಇದರ ಪರಿಣಾಮ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತ್ತು. ಮಳೆಗಾಲದಲ್ಲಿ ಸ್ಥಾವರದ ದುರಸ್ತಿ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಿದ್ಯುತ್ ಉತ್ಪಾದನೆ ಕಡಿಮೆಯಾಗಿ ಸಮಸ್ಯೆ ಎದುರಾಗಿತ್ತು. ಮಳೆ ಕಡಿಮೆಯಾಗಿದ್ದರಿಂದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದ್ದು, ಇನ್ನು 8-10 ದಿನಗಳಲ್ಲಿ ಪ್ಲಾಂಟ್ ಗಳ ದುರಸ್ತಿ ಕಾರ್ಯ ಪೂರ್ಣಗೊಂಡು ವಿದ್ಯುತ್ ಸಮಸ್ಯೆ ಸುಧಾರಣೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.