ದೇಶಾದ್ಯಂತ ಆಗಸ್ಟ್ 10 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು. ವಿದ್ಯುತ್ ಕಾಯ್ದೆ – 2003ರ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2003 ರ ತಿದ್ದುಪಡಿಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ್ದು ಇದನ್ನು ವಿರೋಧಿಸಿ ವಿದ್ಯುತ್ ನೌಕರರ ಸಂಘಟನೆಯ ಅಧಿಕಾರಿಗಳು, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಹೋರಾಟಕ್ಕೆ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಕೂಡ ಬೆಂಬಲ ನೀಡಿದ್ದು, ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತವಾಗಲಿದ್ದು ಇಡೀ ದೇಶವೇ ಕಗ್ಗತ್ತಲಲ್ಲಿ ಮುಳುಗಲಿದೆ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರ ತೀವ್ರ ವಿರೋಧದ ನಡುವೆಯೂ ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿದೆ. ಇದರಿಂದ ಬಡವರಿಗೆ ಮತ್ತು ರೈತರಿಗೆ ನೀಡಲಾಗುತ್ತಿರುವ ಭಾಗ್ಯಜ್ಯೋತಿಯಂತಹ ಉಚಿತ ಯೋಜನೆಗಳು ಸ್ಥಗಿತವಾಗಲಿದೆ. ವಿದ್ಯುತ್ ದರ ಏರಿಕೆಯಿಂದ ಜನ ತತ್ತರಿಸಲಿದ್ದಾರೆ. ಇನ್ನು ಉದ್ಯಮವನ್ನು ನಂಬಿಕೊಂಡ ಬಹುತೇಕ ಜನ ನಿರುದ್ಯೋಗಿಗಳಾಗಲಿದ್ದಾರೆ ಎಂದು ಹೇಳಲಾಗಿದೆ.