alex Certify BREAKING : ಬೆಂಗಳೂರಿನಲ್ಲಿ ‘ವಿದ್ಯುತ್ ಕಂಬ’ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ‘ವಿದ್ಯುತ್ ಕಂಬ’ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು : ವಿದ್ಯುತ್ ಕಂಬ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸುದ್ದಗುಂಟೆ ಪಾಳ್ಯದ ಪಟಾಲಂ ಪ್ರಾವೀಜನ್ ಸ್ಟೋರ್ ಬಳಿ ಈ ಘಟನೆ ನಡೆದಿದೆ. ಪ್ರಿಯಾ ಎಂಬ ವಿದ್ಯಾರ್ಥಿನಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ವಿದ್ಯುತ್ ಕಂಬ ಬಿದ್ದು ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ಗೆ ವಿದ್ಯುತ್ ಕಂಬದ ಕೇಬಲ್ ಒಂದು ಸಿಲುಕಿ ಕಂಬ ಕೆಳಗೆ ಬಿದ್ದಿದೆ ಎನ್ನಲಾಗಿದೆ.

ಕ್ರೈಸ್ಟ್ ಕಾಲೇಜಿನಲ್ಲಿ ಪ್ರಿಯಾ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...