ದಾವಣಗೆರೆ: ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ನವೆಂಬರ್ ನಿಂದ ಕಬ್ಬು ಅರೆಯುವ ಕಾರ್ಯವನ್ನು ಆರಂಭಿಸಲಿರುವ ರಾಜ್ಯದ 65 ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡುವಂತೆ ಆದೇಶಿಸಲಾಗಿದೆ.
ಶಾಸಕ ಶಾಮನೂರು ಶಿವಶಂಕರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್ ಅನ್ನು ಹೊರಗಿನವರಿಗೆ ಮಾರಾಟ ಮಾಡದೇ ಸರ್ಕಾರಕ್ಕೆ ನೀಡುವಂತೆ ಆದೇಶಿಸಲಾಗಿದೆ. ರಾಜ್ಯದಲ್ಲಿ ಮಳೆ ಇಲ್ಲದ ಕಾರಣ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ನವೆಂಬರ್ ನಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವ ಕಾರ್ಯ ಆರಂಭಿಸಲಿವೆ. ಆಗ ವಿದ್ಯುತ್ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ತಿಳಿಸಿದ್ದಾರೆ.
ರಾಜ್ಯದ ಬೆಳಗಾವಿ, ಬಾಗಲಕೋಟೆ ಸೇರಿ ರಾಜ್ಯದಲ್ಲಿನ 65 ಸಕ್ಕರೆ ಕಾರ್ಖಾನೆಗಳಲ್ಲಿ ವಿದ್ಯುತ್ ಉತ್ಪಾದಿಸುತ್ತಿದ್ದು, ಇವುಗಳು ಹೊರಗಡೆ ವಿದ್ಯುತ್ ಮಾರಾಟ ಮಾಡದೆ ಸರ್ಕಾರಕ್ಕೆ ವಿದ್ಯುತ್ ಮಾರಾಟ ಮಾಡುವಂತೆ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಕೊರತೆಗೆ ಕೊಂಚ ಪರಿಹಾರ ಸಿಗಬಹುದು ಎಂದು ಹೇಳಿದ್ದಾರೆ.