alex Certify SHOCKING: ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಪುತ್ತೂರು ತಾಲೂಕಿನ ಕೆದಂಬಾಡಿಯ ಸನ್ಯಾಸಿ ಗುಡ್ಡೆ ನಿವಾಸಿ ಹೈದರಾಲಿ ಅವರ ಮಗ ಮಹಮದ್ ಆದಿಲ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ.

ತಾಯಿಯ ತವರು ಮನೆ ಬೆಳ್ಳಾre ಐವರ್ನಾಡು ಗ್ರಾಮದ ಕೈಯಲ್ ತಡ್ಕಕ್ಕೆ ಬಂದಿದ್ದ ಆದಿಲ್ ಮಧ್ಯಾಹ್ನ ಮನೆಯಲ್ಲಿ ಹಳೆಯ ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ನೆಲಕ್ಕೆ ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿದ್ದು, ಈ ವೇಳೆಗಾಗಲೇ ಮೃತಪಟ್ಟಿದ್ದಾನೆ. ಬಾಲಕನ ಎಡಗೈಯಲ್ಲಿ ಚರ್ಮ ಕಿತ್ತು ಹೋಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...