
ಕೊಪ್ಪಳ: ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.
ವಿನಯ್ ಶ್ರೀಶೈಲ(13) ಮೃತಪಟ್ಟ ಬಾಲಕ. ಶುಕ್ರವಾರ ಬಾಲಕ ವಿನಯ್ ಶ್ರೀಶೈಲ ಹಳ್ಳದಿಂದ ಮನೆಗೆ ತೆರಳುವಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ವಿನಯ್ ಸ್ಥಳದಲ್ಲೇ ಸಾವನ್ನುಪ್ಪಿದ್ದಾನೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.