ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪ್ರತ್ಯಕ್ಷವಾಗಿ, ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕೊನೆಗೂ ಬೋನಿಗೆ ಕೆಡವಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ಮೊದಲ ಹಂತದಲ್ಲಿ ಚಿರತೆ ಪ್ರತ್ಯಕ್ಷವಾಗಿ ಕೆಲ ದಿನಗಳಿಂದ ಓಡಾಟ ನಡೆಸಿತ್ತು. ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿತ್ತು. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಲಕ್ಷಾಂತರ ಜನ ಐಟಿ ಉದ್ಯೋಗಿಗಳಲ್ಲಿಯೂ ಭಯವುಂಟುಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಜನರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಚಿರತೆ ಸೆರೆ ಹಿಡಿದಿದ್ದಾರೆ.
ಸೆರೆ ಹಿಡಿದಿರುವ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ.