alex Certify ‘ಕುಶ’ಗೆ ದಿಲ್ ಖುಷ್: ರೇಡಿಯೋ ಕಾಲರ್ ಅಳವಡಿಸಿ ಮರಳಿ ಕಾಡಿಗೆ ಆನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕುಶ’ಗೆ ದಿಲ್ ಖುಷ್: ರೇಡಿಯೋ ಕಾಲರ್ ಅಳವಡಿಸಿ ಮರಳಿ ಕಾಡಿಗೆ ಆನೆ

ಬೆಂಗಳೂರು: ಅರಣ್ಯ ಇಲಾಖೆ ಸೆರೆಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ‘ಕುಶ’ನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ.

ಈ ಸಂಬಂಧ ಅವರ ಬೆಂಗಳೂರು ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಸೆರೆ ಹಿಡಿದು ತರಲಾಗಿತ್ತು, ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಚಿವ ಅರವಿಂದ ಲಿಂಬಾವಳಿ ಅವರು ಸಭೆ ನಡೆಸಿ ಮಾಹಿತಿ ಪಡೆದರು. ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದರು.

ಅಂತಿಮವಾಗಿ ಸಚಿವರು ಕುಶ ಆನೆಗೆ ರೇಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ ಎಲ್ಲಾ  ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ 5 ಆನೆ ಮರಿ ಒಳಗೊಂಡಂತೆ ಒಟ್ಟು 7 ಆನೆಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆಯಲು ಸಚಿವರು ಆದೇಶಿಸಿದ್ದಾರೆ.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥ ಸಂಜಯ್ ಮೋಹನ್. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ವಿಜಯಕುಮಾರ್ ಗೋಗಿ ಮೊದಲಾದವರು ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...