ಚಿಕ್ಕಮಗಳೂರು: ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದ ಬಳಿ ಕಾಡಾನೆ ದಾಳಿಯಿಂದಾಗಿ 45 ವರ್ಷದ ಶೋಭಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮೂರು ತಿಂಗಳಲ್ಲಿ ಮೂವರು ಬಲಿಯಾಗಿದ್ದಾರೆ. ಕಾಡಾನೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಾಡಾನೆ ದಾಳಿಯಿಂದ ಮಹಿಳೆ ಬೆಳಗ್ಗೆ 7.30 ಕ್ಕೆ ಮಹಿಳೆ ಮೃತಪಟ್ಟಿದ್ದು, ಸಂಜೆ 6 ಗಂಟೆಗೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸ್ಥಳಕ್ಕೆ ಬಂದಿದ್ದಾರೆ. ಶಾಸಕರ ನಡೆಯನ್ನು ಗ್ರಾಮಸ್ಥರು ಪ್ರಶ್ನಿಸಿದ್ದು, ಈ ವೇಳೆ ಶಾಸಕರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿದ್ದಾರೆ. ಶಾಸಕರನ್ನು ತಮ್ಮ ಜೀಪ್ ನಲ್ಲಿಯೇ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.