ರಾಮನಗರ: ಕಾಡಾನೆ ದಾಳಿಗೆ ರೈತರಿಬ್ಬರು ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ.
65 ವರ್ಷದ ಕರಿಯಪ್ಪ ಮೃತರು. ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು ಬೆಳಿಗ್ಗೆ ಹೋಗಿದ್ದ ಕರಿಯಪ್ಪ ಮೇಲೆ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.