ಕೊಡಗು: ಕಾಡಾನೆ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಿಶಾನಿ ಬೆಟ್ಟದಲ್ಲಿ ನಡೆದಿದೆ.
ನಿಶಾನಿ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದವರಿಗೆ ವೃದ್ಧನ ಶವ ಕಂಡುಬಂದಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಅಪ್ಪಚ್ಚ (60) ಮೃತ ದುರ್ದೈವಿ.
ಶನಿವಾರ ಸಂಜೆಯಿಂದ ಅಪ್ಪಚ್ಚ ಮನೆಗೆ ವಾಪಾಸ್ ಆಗಿರಲಿಲ್ಲ. ಇಂದು ನಿಶಾನಿ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದು, ಕಾಡಾನೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಶವ ಪತ್ತೆಯಾಗಿರುವ ಜಾಗದಲ್ಲಿ ಆನೆಯ ಹೆಜ್ಜೆ ಗುರುತುಗಳು ಕಂಡುಬಂದಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.