
ಹಾಸನ: ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೋರ್ವ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ನಾಲ್ವರು ಬಲಿಯಾದಂತಾಗಿದೆ.
ಸುಶೀಲಮ್ಮ (63) ಮೃತ ಮಹಿಳೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಸೊಂಡಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ಕಾಲಿನಿಂದ ತಲೆ ತಿಳಿದು ಸಾಯಿಸಿದೆ.
ಕಾಡಾನೆ ದಾಳಿಯಿಂದ ಮಹಿಳೆಯ ಸಾವು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸುವಂತೆ ಆಗ್ರಹಿಸಿದ್ದಾರೆ. ರಸ್ತೆ ತಡೆ ನಡೆಸಿ, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.