
ಮೈಸೂರು: ಜಮೀನಿಗೆ ಹೋಗಿದ್ದ ಯುವಕ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ.
ಅವಿನಾಶ್ (21) ಮೃತ ಯುವಕ. ಜಮೀನಿಗೆ ಹೋಗಿದ್ದ ಯುವಕನ ಮೇಲೆ ಏಕಾಏಕಿ ಕಾಡಾನೆಗಳ ಹಿಂಡು ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಜಮೀನಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಡಾನೆಗಳ ಸೆರೆಗೆ ಮುಂದಾಗದ ಅರಣ್ಯ ಇಲಾಖೆ ವಿರುದ್ಧ ಕುಟುಂಬದವರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮೀನು ಬಳಿಯೇ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟಿದ್ದಾರೆ ಎಂದು ತಿಳಿದುಬದಿದೆ.