alex Certify BREAKING: ಕಾಡಾನೆ ದಾಳಿಗೆ ಇಬ್ಬರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಡಾನೆ ದಾಳಿಗೆ ಇಬ್ಬರು ಬಲಿ

ಮಂಗಳೂರು: ಮೀನಾಡಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಗ್ರಾಮದ ಬಳಿ ಘಟನೆ ನಡೆದಿದೆ.

ರಂಜಿತಾ(21), ರಮೇಶ ರೈ(60) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ ರಂಜಿತಾ ಅವರು ಪೇರಡ್ಕ ಹಾಲು ಸಹಕಾರ ಸಂಘದ ಸಿಬ್ಬಂದಿಯಾಗಿದ್ದಾರೆ. ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಇದೇ ವೇಳೆ ರಮೇಶ್ ರೈ ಅವರ ಮೇಲೆಯೂ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಗೊಳಗಾದ ಇಬ್ಬರೂ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...