ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ದೇವಾಲಯದ ಆನೆ ತುಳಿದು ಮಾವುತನ ಸಹಾಯಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಧರೆಪ್ಪ ಭೇವನೂರ(32) ಮೃತಪಟ್ಟವರು. ಅಲಖನೂರ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದ ಆನೆ ಧ್ರುವ ತುಳಿದು ದುರ್ಘಟನೆ ಸಂಭವಿಸಿದೆ.
ಸೋಮವಾರ ಆನೆಗೆ ಮೇವು ಹಾಕಲು ಹೋಗಿದ್ದ ಸಂದರ್ಭದಲ್ಲಿ ಆನೆ ದಾಳಿ ಮಾಡಿದ್ದು, ಧರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರೆಪ್ಪ ಅವರು 10 ದಿನಗಳ ಹಿಂದಷ್ಟೇ ಗಂಡು ಮಗುವಿನ ತಂದೆಯಾಗಿದ್ದರು. ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.