ಮಡಿಕೇರಿ: ಕೊಡಗು ಜಿಲ್ಲೆ ಸಿದ್ದಾಪುರದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆ ತುಳಿತಕ್ಕೆ ಕಾರ್ಮಿಕ ಬಲಿಯಾಗಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಾಫಿ ಪಲ್ಪಿಂಗ್ ಕಣದಲ್ಲಿ ಮಲಗಿದ್ದ 22 ವರ್ಷದ ಯುವಕ ಸಂದೀಪ್ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ರಾಜು ಅದೃಷ್ಟವಶಾತ್ ಆನೆ ದಾಳಿಯಿಂದ ಪಾರಾಗಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.