ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ.
ಕಾಫಿ ತೋಟಕ್ಕೆ ತೆರಳಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ನಡೆದಿದ್ದು, 45 ವರ್ಷದ ವಸಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅರಣ್ಯ ಇಲಾಖೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದು, ಆನೆ ದಾಳಿ ನಡೆದ ಸ್ಥಳದಲ್ಲಿಯೇ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ ಬಗ್ಗೆ ಮಾಹಿತಿ ನೀಡಿದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರದಿರುವುದರ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.