
ಮೈಸೂರು: ಮನೆಯಲ್ಲಿ ಅಕ್ರಮವಾಗಿ ಆನೆ ದಂತ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮೈಸೂರಿನ ಉದಯಗಿರಿಯಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಅಭಿರಾಮ ಸುಂದರಂ ಎಂಬುವವರನ್ನು ಬಂಧಿಸಿದ್ದಾರೆ.
ಮನೆಯಲ್ಲಿದ್ದ ಆನೆ ದಂತವನ್ನು ಹಶಕ್ಕೆ ಪಡೆದಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.