ಹಾವಿನ ವಿಷದ ಪ್ರಕರಣದಲ್ಲಿ ಯೂಟ್ಯೂಬರ್ ಎಲ್ವಿಶ್ ಯಾದವ್ ಅವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನೋಯ್ಡಾ ಪೊಲೀಸರು ಸೆಕ್ಟರ್ 39 ರಲ್ಲಿ ಎಫ್‌ಐಆರ್ ದಾಖಲಿಸಿದ್ದರು,
ಇಂದು ಎಲ್ವಿಶ್ ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಯಿತು ನಂತರ ಅವರನ್ನು ಬಂಧಿಸಲಾಯಿತು. ಸ್ವಲ್ಪ ಸಮಯದ ನಂತರ ಎಲ್ವಿಶ್ ಯಾದವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಎಲ್ವಿಶ್ ಯಾದವ್ ಹಾವಿನ ವಿಷದ ಪ್ರಕರಣ:
ಬಿಗ್ ಬಾಸ್ ಒಟಿಟಿ 2 ವಿಜೇತ ಎಲ್ವಿಶ್ ಯಾದವ್ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್(ಪಿಎಫ್‌ಎ) ಸಂಘಟನೆಯು ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾ ಪೊಲೀಸರು ಸೆಕ್ಟರ್ 51 ರಲ್ಲಿರುವ ಬ್ಯಾಂಕ್ವೆಟ್ ಹಾಲ್ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸಿದ್ದರು.
ಎಲ್ವಿಶ್ ವಿದೇಶಿಯರನ್ನು ಆಹ್ವಾನಿಸುವ ಮತ್ತು ವಿಷಕಾರಿ ಹಾವುಗಳ ವಿಷ ಬಳಸಿ ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶುವೈದ್ಯಕೀಯ ಇಲಾಖೆಯ ಇತ್ತೀಚಿನ ತನಿಖೆಯ ಪ್ರಕಾರ ಒಟ್ಟು ಒಂಬತ್ತು ಹಾವುಗಳಲ್ಲಿ ಐದು ನಾಗರಹಾವುಗಳ ವಿಷ ಗ್ರಂಥಿಗಳನ್ನು ತೆಗೆದುಹಾಕಲಾಗಿದೆ ಮತ್ತು ಉಳಿದ ನಾಲ್ಕು ವಿಷಕಾರಿ ಅಲ್ಲ ಎಂದು ಕಂಡುಬಂದಿದೆ.
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಹಾವಿನ ವಿಷ ಗ್ರಂಥಿಗಳನ್ನು ತೆಗೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.