‘ಕಾಟೇರ’ ಚಿತ್ರದಲ್ಲಿ ನಾಯಕಿ ತೀರಿ ಹೋದ ಸನ್ನಿವೇಶದಲ್ಲಿ ಬರುವ ‘ಮನಸೇಗೆ ಬಂತು ಬಿಟ್ಟು ಹೋಗೋಕೆ’ ಎಂಬ ಎಮೋಷನಲ್ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಹೇಮಂತ್ ಕುಮಾರ್ ಈ ಹಾಡಿಗೆ ಧ್ವನಿಯಾಗಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ .
ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಆರಾಧನಾ, ಕುಮಾರ್ ಗೋವಿಂದ್, ಜಗಪತಿ ಬಾಬು, ಶೃತಿ ಬಣ್ಣ ಹಚ್ಚಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಛಾಯಾಗ್ರಹಣವಿದೆ.