ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ನೀಡಲು ಪ್ರತ್ಯೇಕ ಕೋಶ ಸ್ಥಾಪಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ನಿರ್ವಹಣೆ ಮತ್ತು ಅನುಷ್ಠಾನಕ್ಕಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಒಂದು ಪ್ರತ್ಯೇಕ ಕೋಶ ರಚಿಸಲು ಸರ್ಕಾರ ಮಂಜೂರಾತಿ ನೀಡಿದೆ. ನೌಕರರಿಗೆ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ವ್ಯವಸ್ಥಾಪಕ ನಿರ್ದೇಶಕ, ಜಂಟಿ ನಿರ್ದೇಶಕ, ಉಪನಿರ್ದೇಶಕ ಹಾಗೂ ಯೋಜನಾ ವ್ಯವಸ್ಥಾಪಕ ಸೇರಿದಂತೆ ಒಟ್ಟು 56 ಹುದ್ದೆಗಳನ್ನು ಒಳಗೊಂಡ ಪ್ರತ್ಯೇಕ ಕೋಶವನ್ನು ಸ್ಥಾಪಿಸಲು ಸರ್ಕಾರ ಮಂಜೂರಾತಿ ನೀಡಿದೆ.