ಬೆಂಗಳೂರು: ರಾಜ್ಯದಲ್ಲಿ ಮೇ 10 ರಿಂದ 24 ರವರೆಗೆ ಲಾಕ್ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನೌಕರರಿಗೆ ಕಚೇರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಅನಗತ್ಯವಾಗಿ ರಸ್ತೆಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ನೌಕರರಿಗೆ ಕಚೇರಿಗೆ ಬಂದು ಹೋಗಲು ಸಮಸ್ಯೆಯಾಗುವ ಕಾರಣಕ್ಕೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ.
ವಿಧಾನಸಭೆ ಸಚಿವಾಲಯದ ಅಧಿಕಾರಿಗಳು, ನೌಕರರಿಗೆ ಮೇ 23 ರ ವರೆಗಿನ ಅವಧಿಯಲ್ಲಿ ಕಚೇರಿಗೆ ಹಾಜರಾಗಲು ವಿನಾಯಿತಿ ನೀಡಲಾಗಿದೆ ಎಂದು ಹೇಳಲಾಗಿದೆ.