ಬೆಂಗಳೂರು : ಎನ್.ಪಿ.ಎಸ್ ( NPS) ರದ್ದುಪಡಿಸಿ ಹಳೆಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, ಎನ್.ಪಿ.ಎಸ್ ರದ್ದುಪಡಿಸಿ ಹಳೆಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ‘ಹಳೆಪಿಂಚಣಿ’ ಯೋಜನೆ ಜಾರಿಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.