alex Certify ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಸಮಾವೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಸಮಾವೇಶ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶೇಷಾದ್ರಿಪುರಂ ಗುಂಡೂರಾವ್ ಸಭಾಂಗಣದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಾರಿಗೆ ನೌಕರರ ಸಮಾವೇಶ ಹಮ್ಮಿಕೊಂಡಿದೆ.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ ಸಂಚಾಲಕ ಬಿ. ದೇವರಾಜೇ ಅರಸು ಈ ಬಗ್ಗೆ ಮಾಹಿತಿ ನೀಡಿದ್ದು, ವೇತನ ಹೆಚ್ಚಳ, ವೈದ್ಯಕೀಯ ಸೌಲಭ್ಯ, ವಜಾಗೊಂಡ ನೌಕರರಿಗೆ ಕೆಲಸ ಮೊದಲಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಆಡಳಿತ ವರ್ಗಕ್ಕೆ ಮನವಿ ಮಾಡಲಾಗಿದ್ದು, ಸರ್ಕಾರದಿಂದಲೂ ಬೇಡಿಕೆ ಈಡೇರಿಸಲು ಭರವಸೆ ನೀಡಲಾಗಿತ್ತು. ಆದರೆ, ಇದುವರೆಗೂ ಬೇಡಿಕೆ ಈಡೇರಿಸದ ಕಾರಣ ಸಮಾವೇಶದಲ್ಲಿ ಮುಂದಿನ ಹೋರಾಟ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...